
ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಡಿ ಗೋಕಾಕ ತಾಲೂಕು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿಗಳಾದ ರವಿಂದ್ರ ಅಂಟಿನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
