ನೇಮಕಾತಿಗಾಗಿ ಪ್ರತಿಭಟನೆ ಮಾಡಿದ್ದ ಯುವಕರಿಗೆ ಗುಡ್ ನ್ಯೂಸ್
ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನರನ್ನು ಉಜ್ವಲ ಭವಿಷ್ಯದ ಕಡೆ ಯೋಚಿಸಲು ಪ್ರೇರೇಪಿಸುವ ಬದಲು, ಅವರ ಮೂಲಕ ಅಶಾಂತಿಯನ್ನು ಉಂಟುಮಾಡಲು ಹೊರಟಿರುವ ವಿಪಕ್ಷ ನಾಯಕರ ನಡೆ ಖಂಡನೀಯ’ ಎಂದಿದ್ದಾರೆ.
ಕಳೆದ ಎರಡೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ನಡಸಲಾಗಿದೆ. ವರ್ಷಗಳ ಕಾಲ ಕಾಯಬೇಕಾದ ಅನೇಕ ಅಭ್ಯರ್ಥಿಗಳ ಕಷ್ಟವನ್ನು ನಾವು ಅರಿತಿದ್ದೇವೆ. ಈ ಕಷ್ಟವನ್ನು ಗುರುತಿಸಿ, ಮುಂಬರುವ ನೇಮಕಾತಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಗೊಳಿಸಲಾಗಿದೆ; ಇದರಿಂದ ನೇಮಕಾತಿಯಲ್ಲಾದ ವಿಳಂಬದಿಂದ ಅರ್ಹ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗದಂತೆ ತಡೆಯಲಾಗಿದೆ.
ಸರ್ಕಾರೀ ಉದ್ಯೋಗಕ್ಕಾಗಿ ಇಂದು ಧಾರವಾಡದಲ್ಲಿ ಭಾರೀ ಸಂಖ್ಯೆಯಲ್ಲಿ ಒಗ್ಗಟ್ಟಿನಿಂದ ಪ್ರತಿಭಟನೆ ನಡೆಸಿದ್ದರು. ಅವರ ಪ್ರತಿಭಟನೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಉದ್ಯೋಗಾಕಾಂಕ್ಷಿಗಳ ನಿರಾಸೆ, ನಿರೀಕ್ಷೆ ಎಲ್ಲವೂ ನನಗೆ ಅರ್ಥವಾಗುತ್ತದೆ. ಅವರ ಭವಿಷ್ಯ ನನಗೂ ಮುಖ್ಯ ಎಂದಿದ್ದಾರೆ.
ಜೊತೆಗೆ ಎಲ್ಲಾ ಸಮಸ್ಯೆಗೆ ಬಿಜೆಪಿಯನ್ನೂ ದೂರಿದ್ದಾರೆ. ‘ನಾವು ಅಧಿಕಾರಕ್ಕೆ ಬಂದಾಗ, 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿದ್ದವು. ಇದು ಒಂದೆರೆಡು ದಿನಗಳಲ್ಲಿ ಸೃಷ್ಟಿಯಾದುದಲ್ಲ; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಕಾಲದಲ್ಲಿ ನೇಮಕಾತಿಗಳನ್ನು ಆರಂಭಿಸದಿರುವುದು ಮತ್ತು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಯಾವುದೇ ಸೂಕ್ತ ಯೋಜನೆಯನ್ನು ರೂಪಿಸದಿರುವುದರಿಂದ ಇಷ್ಟು ದೊಡ್ಡ ಸಂಖ್ಯೆಯ ಸರ್ಕಾರಿ ಹುದ್ದೆಗಳು ಖಾಲಿಯಿದ್ದವು. ವಿರೋಧ ಪಕ್ಷದ ನಾಯಕರು ನಿರಪರಾಧಿ ವಿದ್ಯಾರ್ಥಿಗಳಿಗೆ ತಪ್ಪು ಮಾರ್ಗದರ್ಶನ ಮಾಡಿ ತಮ್ಮ ರಾಜಕೀಯ ಸ್ವಾರ್ಥದ ಈಡೇರಿಕೆಗಾಗಿ ಬಳಸಿಕೊಳ್ಳುತ್ತಿರುವುದು ವಿಷಾದನೀಯ.
ಉಳಿದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಪಾರದರ್ಶಕ, ವ್ಯವಸ್ಥಿತ ಮತ್ತು ಕಾಲಮಿತಿಯೊಳಗೆ ಇವೆಲ್ಲವನ್ನು ಭರ್ತಿ ಮಾಡಲಾಗುವುದು ಎಂಬ ವಾಗ್ದಾನ ನೀಡುತ್ತಿದ್ದೇನೆ. ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಹುದ್ದೆಗಳ ನೇಮಕಾತಿಗಾಗಿ ಎಲ್ಲಾ ಅಗತ್ಯ ಆಡಳಿತಾತ್ಮಕ ಮತ್ತು ನೀತಿ ನಿರೂಪಣೆ ಮಾನದಂಡಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಭಾರೀ ಸಂಖ್ಯೆಯಲ್ಲಿ ಖಾಲಿ ಹುದ್ದೆಗಳು ಬಾಕಿ ಉಳಿಯದಂತೆ ತಡೆಯಲು ನೇಮಕಾತಿ ಸಂಸ್ಥೆಗಳನ್ನು ಬಲಪಡಿಸಲಾಗುತ್ತಿದೆ.
